ರಾಯಚೂರು: ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ತಿಂಥಿಣಿನಿ ಸೇತುವೆ ಸಮೀಪ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಗಲಗ ಗ್ರಾಮದ 40 ವರ್ಷದ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ. ಈತ ವಿವಾಹಿತೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.
ಮದುವೆಯಾಗಿದ್ದರೂ ಈತ ವಿವಾಹಿತೆಯೊಂದಿಗೆ ಸಂಬಂಧ ಬೆಳೆಸಿ ಆಕೆಯೊಂದಿಗೆ ಬೆಂಗಳೂರಿನಲ್ಲಿ ವಾಸವಾಗಿದ್ದ. ಇತ್ತೀಚೆಗೆ ಗ್ರಾಮಕ್ಕೆ ಆಗಮಿಸಿದ್ದ ಆತನ ಮೇಲೆ ನಿಗಾ ವಹಿಸಿದ್ದ ದುಷ್ಕರ್ಮಿಗಳು ಹತ್ಯೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಜಾಲಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇವದುರ್ಗ ಸರ್ಕಾರಿ ಆಸ್ಪತ್ರೆಗೆ ಮೃತದೇಹ ಸಾಗಿಸಲಾಗಿದೆ.