ಬೆಂಗಳೂರು: ಶಾಲೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದೆ. ನವೋದಯ ಶಾಲೆಯ 32 ಮಕ್ಕಳು, ಒಬ್ಬರು ಶಿಕ್ಷಕರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.
ಕೊಪ್ಪಳ ಜಿಲ್ಲೆಯ ಕುಕನೂರಿನಲ್ಲಿರುವ ನವೋದಯ ಶಾಲೆಯ 10 ಮಕ್ಕಳಿಗೆ ತಳಕಲ್ ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ನೀಡಲಾಗಿದೆ. ಉಳಿದ ವಿದ್ಯಾರ್ಥಿಗಳನ್ನು ಶಾಲೆಯ ಹಾಸ್ಟೆಲ್ ನಲ್ಲಿ ಐಸೋಲೇಶನ್ ನಲ್ಲಿ ಇರಿಸಲಾಗಿದೆ.
ವಿಜಯನಗರ ಜಿಲ್ಲೆಯಲ್ಲಿ ಒಂದೇ ಶಾಲೆಯ 14 ವಿದ್ಯಾರ್ಥಿನಿಯರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಕಮಲಾಪುರ ಗ್ರಾಮದ ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಸೋಂಕು ತಗುಲಿದೆ. ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಕಮಲಾಪುರದಲ್ಲಿರುವ ಶಾಲೆಯನ್ನು ಸೀಲ್ ಡೌನ್ ಮಾಡಲಾಗಿದೆ.