ಗದಗ: ರಾಜ್ಯಾದ್ಯಂತ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶಾಲಾ-ಕಾಲೇಜುಗಳಲ್ಲೂ ಮಹಾಮಾರಿ ವ್ಯಾಪಕವಾಗಿ ಹರಡುತ್ತಿದೆ. ಇದೀಗ ರಾಜೀವ್ ಗಾಂಧಿ ಆಯುರ್ವೇದ ಕಾಲೇಜಿನಲ್ಲಿ ಕೊರೊನಾ ಸೋಂಕು ಸ್ಫೋಟಗೊಂಡಿದೆ.
ಗದಗ ಜಿಲ್ಲೆಯ ರೋಣ ತಾಲೂಕಿನ ರಾಜೀವ್ ಗಾಂಧಿ ಆಯುರ್ವೇದಿಕ್ ಕಾಲೇಜಿನಲ್ಲಿ ಮೂವರು ವೈದ್ಯರು ಸೇರಿದಂತೆ 30 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕಾಲೇಜಿನಾದ್ಯಂತ ಆತಂಕ ಶುರುವಾಗಿದೆ.
ಈ ಕುರಿತು ರೋಣ ಟಿಹೆಚ್ಒ ಜಗದೀಶ್ ನುಚ್ಚಿನ ಮಾಹಿತಿ ನೀಡಿದ್ದು, ಸೋಂಕಿತರನ್ನು ಆಸ್ಪತ್ರೆಯಲ್ಲಿಯೇ ಐಸೋಲೇಷನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.