ಕೋಲಾರ: ಮೇಕೆದಾಟು ಪಾದಯಾತ್ರೆಯ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಮತ್ತೆ 25 ಪೊಲೀಸ್ ಸಿಬ್ಬಂದಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಮೇಕೆದಾಟು ಪಾದಯಾತ್ರೆ ಕೊರೊನಾ ಸ್ಫೋಟಕ್ಕೆ ಕಾರಣವಾಗಿದೆ.
ಪಾದಯಾತ್ರೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಚಿಕ್ಕಬಳ್ಳಾಪುರದ 10 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ಪತ್ತೆಯಾದ ಬೆನ್ನಲ್ಲೇ ಇದೀಗ ಕೋಲಾರ ಜಿಲ್ಲೆಯ 25 ಪೊಲೀಸರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇದರಿಂದಾಗಿ ಪೊಲೀಸ್ ಸಿಬ್ಬಂದಿಯ ಕುಟುಂಬಕ್ಕೂ ಕೊರೊನಾತಂಕ ಎದುರಾಗಿದೆ.
ಮೇಕೆದಾಟು ಪಾದಯಾತ್ರೆಯಲ್ಲಿ ವಿವಿಧ ಜಿಲ್ಲೆಗಳ ಜನರು ಕೂಡ ಭಾಗವಹಿಸಿದ್ದರಲ್ಲದೇ, ಪಾದಯಾತ್ರೆ ಭದ್ರತೆಗಾಗಿ ಹಲವು ಜಿಲ್ಲೆಗಳ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಒಟ್ಟಾರೆ ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ನಡೆಸಿದ್ದ ಪಾದಯಾತ್ರೆ ರಾಜ್ಯದಲ್ಲಿ ಕೊರೊನಾ ಹರಡಲು ಕಾರಣವಾದಂತಾಗಿದೆ.