ಕೊಪ್ಪಳ: ಜಿಲ್ಲೆಗಳಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ನವೋದಯ ವಸತಿ ಶಾಲೆಯ 32 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಘಟನೆ ಕೊಪ್ಪಳದಲ್ಲಿ ನಡೆದಿದೆ.
ವಿದ್ಯಾರ್ಥಿಗಳಲ್ಲಿ ಕೋವಿಡ್ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕುಕನೂರಿನಲ್ಲಿರುವ ನವೋದಯ ವಸತಿ ಶಾಲೆಗೆ ರಜೆ ನೀಡಿ ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್ ಆದೇಶ ಹೊರಡಿಸಿದ್ದಾರೆ.
ಪೋಷಕರಿಗೆ ಮಾಹಿತಿ ನೀಡಿ ಮಕ್ಕಳನ್ನು ಮನೆಗೆ ವಾಪಸ್ ಕಳಿಸುವಂತೆ ಶಾಲಾ ಆಡಳಿತ ಮಂಡಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.