ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತಿದ್ದು, ಇದೀಗ ಪೊಲೀಸ್ ಇಲಾಖೆಗೂ ವಕ್ಕರಿಸಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.
ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತ ಕಮಲ್ ಪಂತ್ 1 ವಾರ ಹೋಂ ಐಸೋಲೇಷನ್ ಆಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ಪೊಲೀಸ್ ಆಯುಕ್ತರಿಗೆ ಕೊರೊನಾ ಸೋಂಕು ಬೆನ್ನಲ್ಲೇ ಇದೀಗ ಆಯುಕ್ತರ ಕಚೇರಿಯ ಇತರ ಸಿಬ್ಬಂದಿಗಳಿಗೆ ಹಿರಿಯ ಪೊಲೀಸ್ ಅಧಿಕಾರಿಗಳಿಗೂ ಕೋವಿಡ್ ಭೀತಿ ಶುರುವಾಗಿದೆ.