ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಗಿದೆ.
ಪಾಸಿಟಿವ್ ಬಂದು ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಮೇಲೆ ನಿಗಾ ವಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಐಸೋಲೇಷನ್ ನಲ್ಲಿ ಇರುವವರಿಗೆ ಆತ್ಮಸ್ಥೈರ್ಯ ತುಂಬಬೇಕು. ಬೇಗನೆ ಗುಣಮುಖರಾಗುವಂತೆ ಅವರಿಗೆ ಆತ್ಮಸ್ಥೈರ್ಯ ತುಂಬಿ ಹೋಂ ಐಸೋಲೇಷನ್ ಕಿಟ್ ಗಳನ್ನು ಮನೆಗಳಿಗೆ ತಲುಪಿಸುವ ವ್ಯವಸ್ಥೆ ಮಾಡಬೇಕು ಎಂದು ಸಿಎಂ ತಿಳಿಸಿದ್ದಾರೆ.
ಸಿಎಂ ಸೂಚನೆಯಂತೆ ಆದಷ್ಟು ಬೇಗನೆ ಕಿಟ್ ಒದಗಿಸಲಾಗುವುದು. ಸ್ವಯಂಸೇವಕರನ್ನು ಬಳಸಿಕೊಂಡು ಕಾರ್ಯಪ್ರವೃತ್ತರಾಗಲು ಸೂಚನೆ ನೀಡಲಾಗಿದೆ. ಗ್ರಾಮಾಂತರ ಪ್ರದೇಶದಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ. ಕೊರೊನಾ ಸೋಂಕು ನಿಯಂತ್ರಣ, ಲಸಿಕೆ ನೀಡಲು ಸೂಚನೆ ನೀಡಲಾಗಿದ್ದು, ಮಕ್ಕಳ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ಮುಂದಿನ ಕ್ರಮಗಳ ಬಗ್ಗೆ ಶುಕ್ರವಾರದ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.