ಪಾಟ್ನಾ: ಮನೆಯ ಬಳಿಯೇ ಆಟವಾಡುತ್ತಿದ್ದ ಇಬ್ಬರು ಮಕ್ಕಳು ಆಕಸ್ಮಿಕವಾಗಿ ಚರಂಡಿಗೆ ಬಿದ್ದು, ಸಾವನ್ನಪ್ಪಿರುವ ಘೋರ ದುರಂತ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.
9 ವರ್ಷದ ರುಬೀನಾ ಹಾಗೂ 10 ತಿಂಗಳ ಸಹೋದರ ಸುಮಿತ್ ಕುಮಾರ್ ಮೃತ ಮಕ್ಕಳು. ಆಟವಾಡುತ್ತಾ ಇದ್ದ ಮಕ್ಕಳು 15 ಅಡಿ ಆಳದ ಚರಂಡಿಗೆ ಬಿದ್ದು ಮೃತಪಟ್ಟಿದ್ದಾರೆ.
ಮಕ್ಕಳು ಎಷ್ಟು ಹೊತ್ತಾದರೂ ಮನೆಗೆ ಬಾರದಿದ್ದಾಗ ಪೋಷಕರು ಹುಡುಕಾಟ ನಡೆಸಿದ್ದಾರೆ. ಅರ್ಧ ಗಂಟೆ ಬಳಿಕ ಮಕ್ಕಳಿಬ್ಬರ ಮೃತದೇಹ ಚರಂಡಿಯಲ್ಲಿ ಪತ್ತೆಯಾಗಿದೆ. ಇಬ್ಬರೂ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.