alex Certify BREAKING NEWS: ಕೊರೊನಾ ಸೋಂಕು ಮತ್ತೆ ಸ್ಫೋಟ; ಒಂದೇ ದಿನದಲ್ಲಿ ಏರಿಕೆಯಾದ ಸೋಂಕಿತರ ಸಂಖ್ಯೆ; 24 ಗಂಟೆಯಲ್ಲಿ 441 ಜನ ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕೊರೊನಾ ಸೋಂಕು ಮತ್ತೆ ಸ್ಫೋಟ; ಒಂದೇ ದಿನದಲ್ಲಿ ಏರಿಕೆಯಾದ ಸೋಂಕಿತರ ಸಂಖ್ಯೆ; 24 ಗಂಟೆಯಲ್ಲಿ 441 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಮತ್ತೆ ಸ್ಫೋಟಗೊಂಡಿದ್ದು, ಕಳೆದ 24 ಗಂಟೆಯಲ್ಲಿ 2,82,970 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದ್ದು, 24 ಗಂಟೆಯಲ್ಲಿ 441 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 487202 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1831000 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 188157 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 35583039 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ 76,35,229 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,58,88,47,554 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 18,69,642 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...