![](https://kannadadunia.com/wp-content/uploads/2020/12/Vidhan-Soudha-1.jpg)
ಬೆಂಗಳೂರು: ನಿಗಮ, ಮಂಡಳಿ ನೇಮಕಾತಿಗೆ ಬಿಜೆಪಿ ವರಿಷ್ಠರು ಗ್ರೀನ್ ಸಿಗ್ನಲ್ ನೀಡುತ್ತಿದ್ದಂತೆ ಪ್ರಕ್ರಿಯೆ ಆರಂಭವಾಗಿದೆ. ಒಂದೂವರೆ ವರ್ಷ ನಿಗಮ-ಮಂಡಳಿಗಳಲ್ಲಿ ಅವಧಿ ಪೂರೈಸಿದವರ ಬದಲಾವಣೆ ಮಾಡಿ ಹೊಸಬರಿಗೆ ಅವಕಾಶ ನೀಡಲಾಗುತ್ತಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ರಾಜ್ಯ ಬಿಜೆಪಿ ನಾಯಕರ ಸಮಾಲೋಚನೆ ಬಳಿಕ ಪಕ್ಷದ ಕಾರ್ಯಕರ್ತರಿಗೆ ನಿಗಮ-ಮಂಡಳಿ ಅಧ್ಯಕ್ಷ ಸದಸ್ಯ ಸ್ಥಾನ ನೀಡಲು ತೀರ್ಮಾನಿಸಲಾಗಿದ್ದು, ಈಗಾಗಲೇ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ ಎಂದು ಹೇಳಲಾಗಿದೆ.
ಒಂದೂವರೆ ವರ್ಷದ ಅವಧಿ ಪೂರೈಸಿದವರ ಬದಲಾವಣೆ ಮಾಡಿ ಹೊಸದಾಗಿ ನೇಮಕ ಮಾಡಲಾಗುತ್ತದೆ. ವಿಧಾನಸಭೆ ಚುನಾವಣೆ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ದೃಷ್ಠಿಯಲ್ಲಿಟ್ಟುಕೊಂಡು ಬಿಜೆಪಿ ಕಾರ್ಯಕರ್ತರಿಗೆ ನೇಮಕಾತಿಯಲ್ಲಿ ಆದ್ಯತೆ ನೀಡಲಾಗುತ್ತಿದೆ. ನಿಗಮ-ಮಂಡಳಿ ಅಧ್ಯಕ್ಷರ ಸದಸ್ಯ ಸ್ಥಾನದ ಮೇಲೆ ಕಣ್ಣಿಟ್ಟಿರುವವರು ಅವಕಾಶ ಪಡೆಯಲು ತಮ್ಮ ನಾಯಕರ ಮೂಲಕ ಒತ್ತಡ ತಂತ್ರ ಅನುಸರಿಸುತ್ತಿದ್ದಾರೆನ್ನಲಾಗಿದೆ.