ಮಂಗಳೂರು: ಪುರೋಹಿತರೊಬ್ಬರನ್ನು ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಖರ್ತರ್ನಾಕ್ ದಂಪತಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಭವ್ಯ (30) ಹಾಗೂ ಹಾಸನ ಜಿಲ್ಲೆಯ ಕುಮಾರ್ (35) ಬಂಧಿತ ಆರೋಪಿಗಳು. ಚಿಕ್ಕಮಗಳೂರು ಮೂಲದ ಪುರೋಹಿತರೊಬ್ಬರನ್ನು ಹನಿಟ್ರ್ಯಾಪ್ ಜಾಲಕ್ಕೆ ಕೆಡವಿ ಬ್ಲ್ಯಾಕ್ ಮೇಲ್ ಮಾಡಿ ಬರೋಬ್ಬರಿ 49 ಲಕ್ಷ ರೂಪಾಯಿ ಹಣ ವಸೂಲಿ ಮಾಡಿದ್ದರು ಎನ್ನಲಾಗಿದೆ.
ದಂಪತಿ ಇಬ್ಬರೂ ಹಲವು ಜನರಿಗೆ ಇದೇ ರೀತಿ ವಂಚಿಸಿ ಬೆದರಿಕೆಯೊಡ್ಡಿ ಹಣ ವಸೂಲಿ ಮಾಡುತ್ತಿದ್ದರು. ವಂಚನೆಗೊಳಗಾದವರ ದೂರಿನ ಹಿನ್ನೆಲೆಯಲ್ಲಿ ಇದೀಗ ಮಂಗಳೂರು ಸಿಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.