ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು, 2023 ರ ವರೆಗೂ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ. ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಮುಖ್ಯಮಂತ್ರಿಯವರೇ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ಹೈಕಮಾಂಡ್ ನಾಯಕರು ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬ್ಯುಸಿಯಾಗಿದ್ದಾರೆ. ಚುನಾವಣೆ ಬಳಿಕ ಹೈಕಮಾಂಡ್ ನಾಯಕರ ಜೊತೆಗೆ ಸಿಎಂ ಚರ್ಚೆ ನಡೆಸಲಿದ್ದಾರೆ. ಹೈಕಮಾಂಡ್ ಜೊತೆ ಚರ್ಚಿಸಿ ಸಿಎಂ ಅವರೇ ನಿರ್ಧಾರ ಕೈಗೊಳ್ಳುತ್ತಾರೆ. ಯಾವುದೇ ಗೊಂದಲಗಳಿದ್ದರೆ ನಾಯಕರು ಹೈಕಮಾಂಡ್ ಜೊತೆಗೆ ಚರ್ಚಿಸಲಿ ಎಂದು ಹೇಳಿದ್ದಾರೆ.