ಬೆಂಗಳೂರು: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ 121.47 ಕೋಟಿ ರೂಪಾಯಿ ಗೌರವಧನ ಬಿಡುಗಡೆ ಮಾಡಲಾಗಿದೆ.
ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 18,000 ಹಾಗೂ ಪ್ರೌಢಶಾಲೆಗಳಲ್ಲಿ 5000ಕ್ಕೂ ಅಧಿಕ ಅತಿಥಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಈ ಅತಿಥಿ ಶಿಕ್ಷಕರಿಗೆ ಗೌರವಧನ ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಪ್ರಾಥಮಿಕ ಶಾಲೆಗಳ ಅತಿಥಿ ಶಿಕ್ಷಕರಿಗೆ ಮಾಸಿಕ 7500 ರೂ., ಪ್ರೌಢಶಾಲೆಗಳ ಅತಿಥಿ ಶಿಕ್ಷಕರಿಗೆ 8000 ರೂ. ಗೌರವ ಸಂಭಾವನೆ ನೀಡಲಾಗುವುದು. ಪ್ರಾಥಮಿಕ ಶಾಲೆಗಳಲ್ಲಿ ಎರಡನೇ ಹಂತದಲ್ಲಿ ನೇಮಕಗೊಂಡ 4000 ಅತಿಥಿ ಶಿಕ್ಷಕರ ಗೌರವಧನ ಬಿಡುಗಡೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ.