ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕಳೆದ 24 ಗಂಟೆಯಲ್ಲಿ 3,33,533 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದಿನದ ಪಾಸಿಟಿವಿಟಿ ರೇಟ್ ಶೇ.17.78ಕ್ಕೆ ಏರಿಕೆಯಾಗಿದೆ
ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಕುಸಿತವಾಗಿದ್ದು, 24 ಗಂಟೆಯಲ್ಲಿ 525 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 489409ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 2187205 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 259168 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 36560650 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ 71,10,445 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,61,92,84,270 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 18,75,533 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.