ಶಿವಮೊಗ್ಗ: ತೋಟದ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದು ಇಬ್ಬರನ್ನು ಬಂಧಿಸಿ ಮೂವರು ಮಹಿಳೆಯರನ್ನು ರಕ್ಷಿಸಿದ್ದಾರೆ.
ತೋಟ ನೋಡಿಕೊಳ್ಳುವ ಕೆಲಸ ಮಾಡುವ ಶಂಕರ ಮತ್ತು ಮುನಿಯಪ್ಪ ಬಂಧಿತ ಆರೋಪಿಗಳು. ಕೆಲಸ ಹುಡುಕುತ್ತಿದ್ದ ಬೇರೆ ಊರುಗಳ ಮಹಿಳೆಯರನ್ನು ಕರೆದುಕೊಂಡು ಬಂದು ವೇಶ್ಯಾವಾಟಿಕೆ ನಡೆಸುತ್ತಿದ್ದರು. ಶಿವಮೊಗ್ಗ ಸಮೀಪದ ತೋಟದ ಮನೆಯಲ್ಲಿ ತೋಟದ ಮಾಲೀಕರಿಗೆ ಗೊತ್ತಾಗದಂತೆ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ಮಹಿಳಾ ಠಾಣೆ ಪೊಲೀಸರು ದಾಳಿ ನಡೆಸಿದ್ದು, ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.