ಹಾಲಿ ರಾಜ್ಯಸಭಾ ಸದಸ್ಯ, ಮಹಾರಾಷ್ಟ್ರದ ಮಾಜಿ ಸಿಎಂ ಶರದ್ ಪವಾರ್ ಅವರು ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಶರದ್ ಪವಾರ್ ಕೋವಿಡ್ ಸೋಂಕಿಗೆ ಪಾಸಿಟಿವ್ ಆಗಿರುವುದನ್ನ ಖಚಿತಪಡಿಸಿದ್ದಾರೆ.
ನನ್ನಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಆದರೆ ಆತಂಕ ಪಡುವ ಅವಶ್ಯಕತೆಯಿಲ್ಲ. ವೈದ್ಯರು ಸೂಚಿಸಿದಂತೆ ನಾನು ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕದಲ್ಲಿರುವ ಎಲ್ಲರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ. ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆಗಳನ್ನು ವಹಿಸಿ ಎಂದು ಶರದ್ ಪವಾರ್ ವಿನಂತಿಸಿದ್ದಾರೆ.
ಕೊರೋನಾ ಸೋಂಕು ದೃಢವಾಗುತ್ತಿದ್ದಂತೆ, ಪ್ರತ್ಯೇಕವಾಗಿರುವ ಶರದ್ ಪವಾರ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದ್ದು ಆತಂಕ ಪಡುವ ಅಗತ್ಯವಿಲ್ಲ. ವೈದ್ಯರ ಸೂಚನಯಂತೆ ಶರದ್ ಪವಾರ್ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನ ವಹಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.