ಶಿವಮೊಗ್ಗ: ಕೋವಿಡ್-19 ರಿಂದ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರೆಸುವಂತೆ ಆರ್ಥಿಕ ಸಹಾಯ ಮಾಡಲು ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಷನ್ ವತಿಯಿಂದ ಆದಿತ್ಯ ಬಿರ್ಲಾ ಕ್ಯಾಪಿಟಲ್ ಕೋವಿಡ್ ವಿದ್ಯಾರ್ಥಿವೇತನ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನಿಸಿದೆ.
1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ 24 ಸಾವಿರ ರೂ., 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ 30 ಸಾವಿರ ರೂ., ವೃತ್ತಿಪರ ಪದವಿ ಪೂರ್ವ ವಿದ್ಯಾರ್ಥಿಗಳಿಗೆ 60 ಸಾವಿರ ರೂ., ಸಾಮಾನ್ಯ ವೃತ್ತಿಪರ ಪದವಿಪೂರ್ವ ವಿದ್ಯಾರ್ಥಿಗಳಿಗೆ 36 ಸಾವಿರ ರೂ. ಆರ್ಥಿಕ ಧನ ಸಹಾಯ ನೀಡಲಾಗುತ್ತಿದೆ.
ಆರ್ಹರು http://www.buddy4study.com/page/aditya-birla-capital-covid-schoarship-programme ಆನ್ಲೈನ್ ಮೂಲಕ ಜನವರಿ 31 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಉಪನಿದೇರ್ಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಮೊಗ್ಗ ಇವರು ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, 100 ಅಡಿ ರಸ್ತೆ, ಆಲ್ಕೊಳ, ಶಿವಮೊಗ್ಗ. ದೂ.ಸಂ.: 08182-295709 ನ್ನು ಸಂಪರ್ಕಿಸುವುದು.