ಬೆಂಗಳೂರು: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಸುವುದನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸಿದೆ. ಕಳೆದ ವರ್ಷ ನೋಂದಣಿ ಮಾಡಿಕೊಂಡ ರೈತರಲ್ಲಿ ಅರ್ಧದಷ್ಟು ರೈತರು ಮಾತ್ರ ಇದುವರೆಗೆ ನೋಂದಣಿ ಮಾಡಿಕೊಂಡಿದ್ದಾರೆ. ರಾಗಿ ಖರೀದಿಸದಿವುದರಿಂದ ರೈತರಿಗೆ ಸಂಕಷ್ಟ ಎದುರಾಗಿದೆ. ಈ ಬಾರಿ ಪ್ರತಿ ಕ್ವಿಂಟಲ್ ರಾಗಿಗೆ 3377 ರೂಪಾಯಿ ನಿಗದಿ ಮಾಡಿ ಪ್ರತಿ ರೈತರಿಂದ 20 ಕ್ವಿಂಟಾಲ್ ರಾಗಿ ಖರೀದಿಗೆ ಮುಂದಾಗಿತ್ತು.
ಇದೇ ಮೊದಲ ಸಲ ಕೇಂದ್ರ ಸರ್ಕಾರ ರಾಜ್ಯದಿಂದ ಕನಿಷ್ಠ ಬೆಂಬಲ ಬೆಲೆಯಡಿ ಖರೀದಿಸುವ ರಾಗಿಗೆ ಮಿತಿ ಹೇರಿದೆ. ಕೇವಲ 2.10 ಲಕ್ಷದ ಟನ್ ರಾಗಿ ಖರೀದಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿರುವುದರಿಂದ ನೋಂದಣಿ ಪ್ರಕ್ರಿಯೆ ಸ್ಥಗಿತಗೊಂಡಿದೆ.
ಮೊದಲೇ ಕೊರೊನಾದಿಂದ ಸಂಕಷ್ಟದಲ್ಲಿರುವ ರೈತರು ರಾಗಿ ಬೆಳೆದಿದ್ದು, ಬೆಂಬಲ ಬೆಲೆ ಯೋಜನೆ ನೆರವಿಗೆ ಬರುವ ನಿರೀಕ್ಷೆಯಲ್ಲಿದ್ದರು. ನೋಂದಣಿ ಪ್ರಕ್ರಿಯೆ ಸ್ಥಗಿತಗೊಳಿಸಿರುವುದರಿಂದ ರಾಗಿ ಬೆಲೆ ಕುಸಿಯುವ ಆತಂಕ ಎದುರಾಗಿದೆ ಎಂದು ಹೇಳಲಾಗಿದೆ.