ರಾಯಚೂರು: ಇಂಧನ ಇಲಾಖೆಯ ವತಿಯಿಂದ ಬೆಳಕು ಯೋಜನೆ ಅನುಷ್ಠಾನಗೊಂಡಿದ್ದು, ಈ ಯೋಜನೆಯಲ್ಲಿ ಬಡವರ ಮನೆಗಳಿಗೆ ವಿದ್ಯುತ್ ಸೌಲಭ್ಯ ಇಲ್ಲದಿದ್ದರೆ ಆ ಮನೆಗಳಿಗೆ ಇಲಾಖೆಯಿಂದ ವಿದ್ಯುತ್ ಕಲ್ಪಿಸಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆ ಅಡಿಯಲ್ಲಿ ವಿದ್ಯುತ್ ಸೌಲಭ್ಯವನ್ನು ಪಡೆಯಲು ಸಾರ್ವಜನಿಕರು ತಮ್ಮ ಸ್ಥಳೀಯ ಕಾರ್ಯ ಮತ್ತು ಪಾಲನೆ ಶಾಖಾ ಕಚೇರಿ ಅಥವಾ ಉಪವಿಭಾಗ ಕಚೇರಿಗಳಲ್ಲಿ ರೇಷನ್ ಕಾರ್ಡ್, ಆಧಾರ್ ಕಾರ್ಡ್ ನೊಂದಿಗೆ ಅರ್ಜಿ ಸಲ್ಲಿಸಿ ನಂತರ ಇಲಾಖೆಯಿಂದ ಅಧಿಕಾರಿಗಳು ಸ್ಥಳ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು.
ಬೆಳಕು ಯೋಜನೆ ಅಡಿಯಲ್ಲಿ ವಿದ್ಯುತ್ ಸೌಲಭ್ಯ ಪಡೆಯಲು ಇಚ್ಛಿಸುವವರಿಗೆ ಇದೇ ಜ.31 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಜೆಸ್ಕಾಂ ಕಾ ಮತ್ತು ಪಾ ವಿಭಾಗದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.