ಬೆಂಗಳೂರಿನ ಮಾಣಿಕ್ ಷಾ ಪರೆಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು.
ಬೆಂಗಳೂರಿನಲ್ಲಿ 73 ನೇ ಗಣರಾಜ್ಯೋತ್ಸವ ಸಂಭ್ರಮ ಮನೆಮಾಡಿದೆ. ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು. 5 ವಾದ್ಯವೃಂದ, BSF, ಅಗ್ನಿಶಾಮಕ ದಳ, ಮಹಿಳಾ ಪೊಲೀಸ್, ಅಶ್ವದಳ ಸೇರಿದಂತೆ 16 ತಂಡಗಳು ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗಿಯಾಗಿವೆ.
ಕೊರೋನಾ ಕಾರಣದಿಂದಾಗಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಬ್ರೇಕ್ ಹಾಕಲಾಗಿದೆ. ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಕೇವಲ 200 ಜನರಿಗಷ್ಟೇ ಪ್ರವೇಶ ನೀಡಲಾಗಿದೆ. ಸ್ವಾತಂತ್ರ್ಯ ಹೋರಾಟಗಾರರು, ಬಿಎಸ್ಸೆಫ್ ಯೋಧರು ಸೇರಿದಂತೆ 200 ಜನರಿಗೆ ಮಾತ್ರ ಅನುಮತಿ ನೀಡಲಾಗಿದೆ.