ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 6 ತಿಂಗಳು ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ಇಂದು ಸರ್ಕಾರದ ಸಾಧನೆ ತಿಳಿಸುವ ಕೈಪಿಡಿ ಬಿಡುಗಡೆ ಮಾಡಲಾಗುವುದು.
ಕಳೆದ ವರ್ಷ ಜುಲೈ 28 ರಂದು ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ವಹಿಸಿಕೊಂಡು ರೈತರ ಮಕ್ಕಳಿಗೆ ವಿದ್ಯಾನಿಧಿ ಸೇರಿದಂತೆ ಹಲವಾರು ಯೋಜನೆ ಜಾರಿಗೆ ತಂದಿದ್ದಾರೆ. ಆಡಳಿತ ಸುಧಾರಣೆ ಸೇರಿದಂತೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದಾರೆ.
ಈ ಬಗ್ಗೆ ಮಾತನಾಡಿದ ಸಿಎಂ, ನಮ್ಮದು ಸ್ಪಂದನಶೀಲ ಸರ್ಕಾರವಾಗಿದ್ದು, ಇದಕ್ಕೆ 100 ದಿನ ಅಥವಾ ಆರು ತಿಂಗಳು ಅಥವಾ ಯಾವುದೇ ಸಮಯ ಮುಖ್ಯವಲ್ಲ, ನಿರಂತರವಾಗಿ ಜನರ ಅಗತ್ಯಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದೇವೆ. ಆರು ತಿಂಗಳು ಪೂರ್ಣಗೊಂಡಿರುವ ಪಕ್ಷಿನೋಟ ತಿಳಿಸಲು ಕೈಪಿಡಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.
ರೈತರು ಜನರ ನೆರವಿಗೆ ಸಂದರ್ಭಕ್ಕೆ ಕಾಯುವ ಅಗತ್ಯವಿಲ್ಲ. ಆಯಾ ಸಂದರ್ಭಕ್ಕೆ ತಕ್ಕಂತೆ ನೆರವು ನೀಡಲಾಗುವುದು ಎಂದು ಹೇಳಿದ್ದಾರೆ. ಸಿಎಂ ಬೊಮ್ಮಾಯಿ ಅವರ ಜನ್ಮದಿನ ಕೂಡ ಇಂದೆ ಇದೆ. ಆದರೆ, ಎಂದೂ ಕೂಡ ಅವರು ಜನ್ಮದಿನ ಆಚರಿಸಿಕೊಂಡಿಲ್ಲ. ಈ ಬಾರಿಯೂ ಆಚರಣೆ ಮಾಡುವುದಿಲ್ಲವೆಂದು ಹೇಳಲಾಗಿದೆ.