ಬೆಂಗಳೂರು: ಸಾಂಸ್ಕೃತಿಕ ನಗರಿ ಮೈಸೂರಿನ ಬಳಿಕ ರಾಜಧಾನಿ ಬೆಂಗಳೂರಿನಲ್ಲಿಯೂ ನಂದಿನಿ ನಕಲಿ ತುಪ್ಪದ ಜಾಲ ಪತ್ತೆಯಾಗಿದ್ದು, ಕೆಎಂಎಫ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಮೈಸೂರಿನಲ್ಲಿ ಉತ್ಪಾದಿಸಲ್ಪಟ್ಟ ನಕಲಿ ತುಪ್ಪ ಬೆಂಗಳೂರು ಹಾಗೂ ಸುತ್ತಮುತ್ತ ಮಾರಾಟ ಮಾಡಲಾಗುತ್ತಿದೆ ಎಂಬ ಅನುಮಾನ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಹಲವು ಅಧಿಕಾರಿಗಳ ವಿಶೇಷ ತಂಡ ರಚನೆ ಮಾಡಿ ಕೆಎಂಎಫ್ ಅಧಿಕಾರಿಗಳು ಹಲವೆಡೆ ದಾಳಿ ನಡೆಸಿದ್ದಾರೆ.
ಹನುಮಂತನಗರ, ಜಯನಗರ, ರಾಜಾಜಿನಗರ, ನೆಲಮಂಗಲ, ಮಾಕಳಿ, ಹೊಸಕೋಟೆಯ ದೇವನಗೊಂದಿ ಹಾಗೂ ಇತರ ಭಾಗಗಳಲ್ಲಿ ಅಧಿಕಾರಿಗಳು ಅಂಗಡಿಗಳು ಹಾಗೂ ಗೋದಾಮುಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ದಾಳಿ ವೇಳೆ ನಂದಿನಿ ತುಪ್ಪದ 1000 ಮಿಲಿ ಸ್ಯಾಚೆ, 15 ಕೆಜಿ ಟಿನ್ ಮಾದರಿಯ ನಕಲಿ ತುಪ್ಪ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.