alex Certify BIG NEWS: ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತೆ; ಡಿಕೆಶಿ ಹೇಳಿಕೆಗೆ ಟಾಂಗ್ ನೀಡಿದ ಸಿ.ಟಿ. ರವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತೆ; ಡಿಕೆಶಿ ಹೇಳಿಕೆಗೆ ಟಾಂಗ್ ನೀಡಿದ ಸಿ.ಟಿ. ರವಿ

ಪಣಜಿ: ಗೋವಾದಲ್ಲಿ ಭ್ರಷ್ಟ ಬಿಜೆಪಿ ಸರ್ಕಾರವಿತ್ತು ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಇದು ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತಾಯ್ತು ಎಂದು ಹೇಳಿದ್ದಾರೆ.

ಪಣಜಿಯಲ್ಲಿ ಮಾತನಾಡಿದ ಸಿ.ಟಿ. ರವಿ, ಡಿಕೆಶಿ ಭ್ರಷ್ಟಾಚಾರ ಕೇಸ್ ನಲ್ಲಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರಗಿದ್ದಾರೆ. ಭೂತದ ಬಾಯಲ್ಲಿ ಬರುವ ಭಗವದ್ಗೀತೆಗೂ, ಡಿಕೆಶಿ ಬಾಯಿಯಲ್ಲಿ ಬರುವ ಭ್ರಷ್ಟಾಚಾರ ಮಾತಿಗೂ ವ್ಯತ್ಯಾಸವಿಲ್ಲ. ಕಾಂಗ್ರೆಸ್ ನಿಂದ ಗೋವಾ ಜನತೆ ಪಾಠ ಕೇಳುವ ಸ್ಥಿತಿಯಲ್ಲಿ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಗೋವಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜಕೀಯ ಅಖಾಡ ರಂಗೇರಿದ್ದು, ರಾಜ್ಯ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಪಣಜಿಯಲ್ಲಿ ಬೀಡುಬಿಟ್ಟಿದ್ದು, ಪರಸ್ಪರ ಆರೋಪ-ಪ್ರತ್ಯಾರೋಪಗಳಿಂದಲೇ ಚುನಾವಣಾ ಪ್ರಚಾರ ಬಿರುಸು ಪಡೆದುಕೊಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...