ರಾಮನಗರ: ನಿರ್ಮಾಣ ಹಂತದ ಕಟ್ಟಡ ಕುಸಿದು ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ರಾಮನಗರದ ಚನ್ನಪಟ್ಟಣದ ಕೃಷ್ಣಾಪುರ ಗ್ರಾಮದಲ್ಲಿ ನಡೆದಿದೆ.
ನಿರ್ಮಾಣ ಹಂತದ ಕಟ್ಟಡದ 2ನೇ ಅಂತಸ್ತಿನಲ್ಲಿ ಬಾಲಕ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಈ ವೇಳೆ ಕಟ್ಟಡ ಕುಸಿದಿದ್ದು, 13 ವರ್ಷದ ಬಾಲಕ ಕಟ್ಟಡದ ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದಾನೆ.
ಬಾಲಕಾರ್ಮಿಕ ಪದ್ಧತಿ ಕಾನೂನು ಬಾಹಿರ ಎಂಬುದು ಗೊತ್ತಿದ್ದರೂ ಬಾಲಕನಿಗೆ ಕಟ್ಟಡ ಕಾಮಗಾರಿ ಕೆಲಸ ಕೊಟ್ಟವರು ಯಾರು ಎಂಬ ಪ್ರಶ್ನೆ ಆರಂಭವಾಗಿದೆ. ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.