ಧಾರವಾಡ: ನಾಡೋಜ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ದಿನೇ ದಿನೇ ಚೆನ್ನವೀರ ಕಣವಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗ್ತಿದೆ.
ಧಾರವಾಡದ SDM ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ. ಕಣವಿಯವರ ಶ್ವಾಸಕೋಶದಲ್ಲಿ ಸೋಂಕಿನ ತೀವ್ರತೆ ಹೆಚ್ಚಾಗಿದ್ದು, ಉಸಿರಾಟದ ಶಕ್ತಿಯನ್ನು ಕಣವಿಯವರ ಶ್ವಾಸಕೋಶ ಕಳೆದುಕೊಂಡಿದೆ.
ಅಕ್ಯೂಟ್ ರೆಸ್ಪಿರೇಟರಿ ಡಿಸ್ಪ್ರೆಸ್ ಸಿಂಡ್ರೋಮ್ ನಿಂದ ಅವರು ಬಳಲುತ್ತಿದ್ದಾರೆ. ಕಳೆದ ಎರಡು ವಾರದಿಂದ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಕಣವಿಯವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುತ್ತಿದೆ.