alex Certify ತಾಯಿ ಮೇಲೆ ಹಲ್ಲೆ ಮಾಡಿ, ಬಂಧನದ ಭಯದಿಂದ ವಿಷ ಸೇವಿಸಿದ ಮಗ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಾಯಿ ಮೇಲೆ ಹಲ್ಲೆ ಮಾಡಿ, ಬಂಧನದ ಭಯದಿಂದ ವಿಷ ಸೇವಿಸಿದ ಮಗ..!

ನವದೆಹಲಿ : ಮಗನೊಬ್ಬ ಸಹೋದರಿಗೆ ನೋಡಿದ ವರ ಸರಿಯಿಲ್ಲ ಎಂದು ಜಗಳ ತೆಗೆದು, ತಾಯಿಯ ಮೇಲೆಯೇ ಹಲ್ಲೆ ಮಾಡಿ ಕೊನೆಗೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ನಗರದ ಗುರುಗ್ರಾಮ್ ಸೆಕ್ಟರ್ ನ ಗಾಂಧಿ ನಗರದ ನಿವಾಸಿಯೇ ಈ ರೀತಿ ಮಾಡಿದ್ದಾನೆ. ಈ ವ್ಯಕ್ತಿ ಕಡಲೆಕಾಯಿ ವ್ಯಾಪಾರ ಮಾಡುತ್ತಿದ್ದ ಎನ್ನಲಾಗಿದ್ದು, ಪತ್ನಿ ಹಾಗೂ ಮೂವರು ಹೆಣ್ಣು ಮಕ್ಕಳೊಂದಿಗೆ ಪ್ರತ್ಯೇಕವಾಗಿ ವಾಸಿಸುತ್ತಿದ್ದ.

ಇತ್ತೀಚೆಗೆ ಈತನ ಕಿರಿಯ ಸಹೋದರಿಯ ಮದುವೆ ನಿಶ್ಚಯವಾಗಿತ್ತು. ಹೀಗಾಗಿ ತಾಯಿಯ ಮನೆಗೆ ಬಂದಿದ್ದಾನೆ. ಆ ಸಂದರ್ಭದಲ್ಲಿ ವರನ ವಿಷಯದಲ್ಲಿ ಆತ ಸರಿಯಾದ ವ್ಯಕ್ತಿಯಲ್ಲ ಎಂದು ಜಗಳ ತೆಗೆದಿದ್ದಾನೆ. ಆಗ ಕುಟುಂಬಸ್ಥರು ಹಾಗೂ ಈತನ ಮಧ್ಯೆ ಜಗಳ ನಡೆದಿದೆ. ಈ ಜಗಳ ವಿಕೋಪಕ್ಕೆ ತೆರಳಿ ತಾಯಿಯ ಮೇಲೆ ಇಟ್ಟಿಗೆಯಿಂದ ಹಲ್ಲೆ ಮಾಡಿದ್ದಾನೆ.

ಹಲ್ಲೆ ಮಾಡುತ್ತಿದ್ದಂತೆ ಪೊಲೀಸರು ಬಂಧಿಸಬಹುದು ಎಂಬ ಆತಂಕದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಗಾಯಗೊಂಡ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ಆಸ್ಪತ್ರೆಯ ಹತ್ತಿರವೇ ಈತ ವಿಷ ಸೇವಿಸಿದ್ದಾನೆ ಎಂದು ತಿಳಿದು ಬಂದಿದೆ.

ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎನ್ನಲಾಗಿದೆ. ಆತನ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...