ಆಂಧ್ರಪ್ರದೇಶ : ರಾಜಕೀಯ ಮುಖಂಡನಿಂದ ಲೈಂಗಿಕ ಕಿರುಕುಳ ಸಹಿಸಲಾರದ ಅಪ್ರಾಪ್ತ ಬಾಲಕಿ, ಡೆತ್ ನೋಟ್ ಬರೆದಿಟ್ಟು, ಮಹಡಿಯಿಂದ ಹಾರಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ವಿಜಯವಾಡ್ ನಲ್ಲಿನ ಅಪಾರ್ಟ್ ಮೆಂಟ್ ನಲ್ಲಿ ಈ ಘಟನೆ ನಡೆದಿದೆ. 14 ವರ್ಷದ ಬಾಲಕಿಗೆ ಅದೇ ಅಪಾರ್ಟ್ ಮೆಂಟ್ ನಲ್ಲಿದ್ದ ನಗರದ 37ನೇ ವಾರ್ಡ್ ನ ಟಿಡಿಪಿ ಮುಖಂಡ ವಿನೋದ್ ಜೈನ್ ಎಂಬ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ತಿಳಿದು ಬಂದಿದೆ.
ಈ ಕುರಿತು ಡೆತ್ ನೋಟ್ ಬರೆದಿಟ್ಟ ಬಾಲಕಿ, ಕಟ್ಟಡದ ಐದನೇ ಮಹಡಿಯಿಂದ ಹಾರಿ ಸಾವನ್ನಪ್ಪಿದ್ದಾಳೆ ಎಂದು ಎಸಿಪಿ ಕೆ. ಹನುಮಂತರಾವ್ ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿನೋದ್ ಜೈನ್ ವಿರುದ್ಧ ಪ್ರಕರಣ ದಾಖಲಾಗಿದೆ. ಟಿಡಿಪಿ ಕೂಡ ಆತನನ್ನು ಪಕ್ಷದಿಂದ ಅಮಾನತು ಮಾಡಿದೆ. ಸದ್ಯ ಆರೋಪಿ ತಲೆ ಮರೆಸಿಕೊಂಡಿದ್ದು, ಪೊಲೀಸರು ಆತನ ಪತ್ತೆಗಾಗಿ ಬಲೆ ಬೀಸಿದ್ದಾರೆ.