ಬೆಂಗಳೂರು: ಟೋಯಿಂಗ್ ವ್ಯವಸ್ಥೆಯಲ್ಲಿ ಬದಲಾವಣೆ ತರುವ ವಿಚಾರವಾಗಿ ಇಂದು ಅಧಿಕಾರಿಗಳ ಜತೆ ಸಭೆ ನಡೆಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಟೋಯಿಂಗ್ ವ್ಯವಸ್ಥೆ ಕುರಿತು ಸಂಜೆ ನಗರ ಪೊಲೀಸ್ ಆಯುಕ್ತರು, ಟ್ರಾಫಿಕ್ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಲಾಗುವುದು. ವಾಹನ ಸವಾರರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ವಾಹನ ಟೋಯಿಂಗ್ ವ್ಯವಸ್ಥೆ ಪುನರ್ ಪರಿಶೀಲಿಸಲಾಗುವುದು. ಹಲವು ಬದಲಾವಣೆ ಜತೆಗೆ ಜನಸ್ನೇಹಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಹಲವಾರು ಘಟನೆ ಬಗ್ಗೆ ಗಮನಿಸಿದ್ದೇನೆ. ವಾಹನ ಟೋಯಿಂಗ್ ವೇಳೆ ಸಾರ್ವಜನಿಕರ ಜತೆ ಕಾನೂನು ರೀತಿ ನಡೆದುಕೊಳ್ಳಬೇಕು ಅತಿರೇಕದ ವರ್ತನೆ ಸರಿಯಲ್ಲ ಎಂದು ಪೊಲೀಸರಿಗೆ ಸೂಚಿಸಿದ್ದರು.