ದೇಶದ 33 ಸೈನಿಕ ಶಾಲೆಗಳಲ್ಲಿ ಬಾಲಕಿಯರ ಪ್ರವೇಶಾತಿಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಜೂನ್ 2022 ರಲ್ಲಿ ಬಾಲಕಿಯರ ಪ್ರಥಮ ಬ್ಯಾಚ್ ಪ್ರವೇಶ ಪಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಮಿಜೋರಾಂನ ಚಿಂಗ್ ಚಿಪ್ ಸೈನಿಕ ಶಾಲೆಯಲ್ಲಿ ಪ್ರಾಯೋಗಿಕವಾಗಿ ಬಾಲಕಿಯರಿಗೆ ಪ್ರವೇಶ ನೀಡಲಾಗಿದ್ದು ಯೋಜನೆ ಯಶಸ್ವಿಯಾದ ಹಿನ್ನೆಲೆಯಲ್ಲಿ ದೇಶದ ವಿವಿಧೆಡೆ ಇರುವ ಸೈನಿಕ ಶಾಲೆಗಳಲ್ಲಿಯೂ ಬಾಲಕಿಯರಿಗೆ ಪ್ರವೇಶ ಕಲ್ಪಿಸಲು ತೀರ್ಮಾನಿಸಲಾಗಿತ್ತು.
ಸೇನಾಪಡೆಗಳಲ್ಲಿ ಮಹಿಳೆಯರಿಗೆ ಆದ್ಯತೆ ನೀಡುವ ಮತ್ತು ಲಿಂಗ ಸಮಾನತೆ ಸಾಧಿಸುವ ಉದ್ದೇಶದಿಂದ ಸೈನಿಕ ಶಾಲೆಗಳಲ್ಲಿ ಬಾಲಕಿಯರಿಗೆ ಪ್ರವೇಶ ನೀಡಲಾಗುತ್ತದೆ. ಈ ನಿಟ್ಟಿನಲ್ಲಿ ಬಾಲಕಿಯರ ಅಗತ್ಯಕ್ಕೆ ತಕ್ಕಂತೆ ಮಹಿಳಾ ಸಿಬ್ಬಂದಿಯನ್ನು ನೇಮಿಸಿಕೊಂಡು ಮೂಲಸೌಕರ್ಯ ಕಲ್ಪಿಸಲು ರಕ್ಷಣಾ ಸಚಿವಾಲಯ ಮುಂದಾಗಿದೆ.