ಬೆಂಗಳೂರು: ಇತ್ತೀಚೆಗಷ್ಟೆ ಕೆಲ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಈ ಮೂಲಕ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದೆ. ವಂದಿತಾ ಶರ್ಮಾ- ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಅನಿಲ್ ಕುಮಾರ್ -ಪ್ರಧಾನ ಕಾರ್ಯದರ್ಶಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಎಂ.ಐ. ಜಮೀರ್ – ಆಯುಕ್ತರು ದೆಹಲಿ ಕರ್ನಾಟಕ ಭವನಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ.