ಆರ್ಥಿಕ ಸಮೀಕ್ಷೆಯ ಪ್ರಕಾರ ಕೋವಿಡ್ ಸಾಂಕ್ರಾಮಿಕದಿಂದಾಗಿ ತೀವ್ರ ಕುಸಿತದಲ್ಲಿದ್ದ ಭಾರತದ ಆರ್ಥಿಕತೆಯು ಈ ವರ್ಷವು ಸುಧಾರಣೆ ಕಾಣುತ್ತದೆ ಎಂದು ಅಂದಾಜಿಸಲಾಗಿದೆ.
2023ನೇ ಸಾಲಿನ ಹಣಕಾಸು ವರ್ಷದಲ್ಲಿ ಲಸಿಕೆಯ ವ್ಯಾಪ್ತಿ, ಪೂರೈಕೆ ಕ್ಷೇತ್ರದಲ್ಲಿ ಸುಧಾರಣೆ ಹಾಗೂ ನಿಯಮಗಳನ್ನು ಸರಾಗಗೊಳಿಸುವುದರಿಂದ ಆರ್ಥಿಕತೆ ಸುಧಾರಿಸಬಹುದು ಎಂದು ನಿರೀಕ್ಷಿಸಲಾಗಿದೆ.
ರಸ್ತೆಗಳು ಮತ್ತು ಹೆದ್ದಾರಿಗಳು, ರೈಲ್ವೆಗಳು ಮತ್ತು ವಸತಿ ಹಾಗೂ ನಗರ ವ್ಯವಹಾರಗಳಂತಹ ಮೂಲ ಸೌಕರ್ಯಗಳ ಮೇಲೆ ಕೇಂದ್ರೀಕರಿಸುವ ಮೂಲಕ ದೇಶದ ಬಂಡವಾಳದ ವೆಚ್ಚವು ಏಪ್ರಿಲ್ನಿಂದ ನವೆಂಬರ್ನಲ್ಲಿ ವರ್ಷಕ್ಕೆ 13.5ರಷ್ಟು ಹೆಚ್ಚಾಗಿದೆ ಎಂದು ಈ ಸಮೀಕ್ಷೆ ಹೇಳಿದೆ. 2021-22ನೇ ಸಾಲಿನ ಏಪ್ರಿಲ್- ನವೆಂಬರ್ನಲ್ಲಿ 2.41 ಲಕ್ಷ ಕೋಟಿ ಇದ್ದ ಬಂಡವಾಳ ವೆಚ್ಚವು 2.74 ಲಕ್ಷ ಕೋಟಿಗೆ ಏರಿಕೆ ಕಂಡಿದೆ.
ಬ್ಯಾಂಕಿಂಗ್ ವ್ಯವಸ್ಥೆ ಕೂಡ ಕೊರೊನಾ ಸಾಂಕ್ರಾಮಿಕ ನೀಡಿದ ಆಘಾತವನ್ನು ಪರಿಣಾಮಕಾರಿಯಾಗಿ ಎದುರಿಸಿದೆ.
ಆರ್ಥಿಕ ಸಮೀಕ್ಷೆಯ ಪ್ರಕಾರ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಭಾರತದ ಆರ್ಥಿಕತೆ ಕುಸಿತದ ನಡುವೆಯೂ ಬೇಡಿಕೆ ನಿರ್ವಹಣೆಗಿಂತ ಪೂರೈಕೆ ಬದಿಯು ಹೆಚ್ಚು ಸುಧಾರಣೆ ಕಂಡಿದೆ.