ನವದೆಹಲಿ: ಬಜೆಟ್ ಮಂಡನೆಗೆ ಮುನ್ನ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಭೇಟಿಯಾಗಿದ್ದಾರೆ.
ರಾಷ್ಟ್ರಪತಿಗಳಿಂದ ಬಜೆಟ್ ಮಂಡನೆಗೆ ಔಪಚಾರಿಕ ಒಪ್ಪಿಗೆ ಪಡೆದುಕೊಂಡಿರುವ ಅವರು ಸಂಸತ್ ಭವನಕ್ಕೆ ತೆರಳಿದ್ದಾರೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸಂಫುಟ ಸಭೆ ನಡೆಯಲಿದೆ. ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಬಜೆಟ್ ಗೆ ಒಪ್ಪಿಗೆ ಪಡೆಯಲಿದ್ದಾರೆ.
11 ಗಂಟೆಗೆ ಲೋಕಸಭೆಯಲ್ಲಿ ವಿತ್ತ ಸಚಿವರು ಬಜೆಟ್ ಮಂಡಿಸಲಿದ್ದಾರೆ. ಈ ಬಾರಿಯೂ ಮುದ್ರಿತ ಪ್ರತಿ ಇರುವುದಿಲ್ಲ. ಡಿಜಿಟಲ್ ರೂಪದಲ್ಲಿ ಬಜೆಟ್ ಇರಲಿದೆ.
ಬಜೆಟ್ ಗಾತ್ರ 35 ಲಕ್ಷ ಕೋಟಿ ರೂಪಾಯಿ ದಾಟುವ ಸಾಧ್ಯತೆ ಇದೆ. ದೆಹಲಿ -ಕೊಲ್ಕತ್ತಾಗೆ ಬುಲೆಟ್ ರೈಲು ಘೋಷಣೆ ಮಾಡುವ ಸಾಧ್ಯತೆ ಇದೆ. ಮೂಲ ಸೌಕರ್ಯ, ಎಲೆಕ್ಟ್ರಿಕ್ ವೆಹಿಕಲ್, ಕೃಷಿ ವಲಯಕ್ಕೆ ವಿಶೇಷ ಒತ್ತು ನೀಡಲಾಗುವುದು ಎನ್ನಲಾಗಿದೆ.