ನವದೆಹಲಿ: ರೈತರ ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆ ಇಳಿಕೆ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಕೇಂದ್ರ ಕೃಷಿ ಕಾಯ್ದೆ ವಾಪಸ್ ಗೆ ಆಗ್ರಹಿಸಿ ದೇಶಾದ್ಯಂತ ರೈತರು ನಡೆಸಿದ್ದ ಪ್ರತಿಭಟನೆ ಮಧ್ಯೆ ರೈತರು ಎಂ ಎಸ್ ಪಿ ಕಡಿತ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು. ಇದೀಗ ರೈತರ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಇಳಿಕೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಪ್ರಸಕ್ತ ವರ್ಷ 5 ಸಾವಿರ ಕೋಟಿ ರೂಪಾಯಿ ಇಳಿಕೆ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ಬಜೆಟ್ ಮಂಡನೆ ವೇಳೆ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಕಳೆದ ವರ್ಷ ಎಂ ಎಸ್ ಪಿ 2.45 ಕೋಟಿ ರೂಪಾಯಿ ನೀಡಲಾಗಿತ್ತು. ಪ್ರಸಕ್ತ ವರ್ಷ ಎಂ ಎಸ್ ಪಿ ಬೆಲೆ 2.37 ಕೋಟಿ ರೂ ಇಳಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.