ನವದೆಹಲಿ: ಅಭಿವೃದ್ಧಿಗೆ ವೇಗ ನೀಡುವಂತಹ ಜನಪರ ಬಜೆಟ್ ಇದಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ರಸ್ತೆ, ರೈಲು, ವಿಮಾನ ನಿಲ್ದಾಣ, ಸಮೂಹ ಸಾರಿಗೆ, ಬಂದರು ಹೀಗೆ ಹಲವು ವಲಯಕ್ಕೆ ಬಜೆಟ್ ನಲ್ಲಿ ಆದ್ಯತೆ ನೀಡಲಾಗಿದೆ. ಮುಂದಿನ 25 ವರ್ಷದ ಮೂಲ ಸೌಕರ್ಯದ ಬಗ್ಗೆ ಬಜೆಟ್ ನಲ್ಲಿ ತಿಳಿಸಲಾಗಿದ್ದು, ಸಮಗ್ರ ಅಭಿವೃದ್ಧಿ ಯೋಜನೆಯ ಬಜೆಟ್ ಇದಾಗಿದೆ ಎಂದು ಹೇಳಿದ್ದಾರೆ.
ಕಾವೇರಿ -ಪೆನ್ನಾರ್ ನದಿ ಜೋಡಣೆಗೆ ಆದ್ಯತೆ ನೀಡಲಾಗಿದೆ. ರಾಜ್ಯಗಳಿಗೆ ಬಡ್ಡಿರಹಿತವಾಗಿ ಸಾಲ ನೀಡಲಾಗುತ್ತಿದ್ದು, 200 ಶೈಕ್ಷಣಿಕ ಚಾನಲ್ ಗಳನ್ನು ಆರಂಭಿಸಿ, ಮಕ್ಕಳಿಗೆ ಶಿಕ್ಷಣಕ್ಕೆ ಆದ್ಯತೆ ನೀಡಲಾಗುತ್ತಿದೆ. 2 ಲಕ್ಷ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಮನೆ ನಿರ್ಮಾಣ, ಕುಡಿಯುವ ನೀರಿಗೂ ಅನುಕೂಲ ಮಾಡಿಕೊಡಲಾಗಿದೆ ಎಂದು ಕೇಂದ್ರ ಬಜೆಟ್ ಕುರಿತು ಸಚಿವ ಪ್ರಹ್ಲಾದ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ.