ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 2 ರಂದು ಬೆಳಗ್ಗೆ ಸುಮಾರು 11 ಗಂಟೆಗೆ ಬಜೆಟ್ ಬಗ್ಗೆ ಭಾಷಣ ಮಾಡಲಿದ್ದಾರೆ.
ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು, ದೇಶದ ಜನರನ್ನುದ್ದೇಶಿಸಿ ಅವರು ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಕೇಂದ್ರ ಬಜೆಟ್ ಮಂಡಿಸಿದ ಒಂದು ದಿನದ ನಂತರ ಪ್ರಧಾನಿ ಮೋದಿಯವರ ಭಾಷಣ ಇದೆ.
ವರದಿಯ ಪ್ರಕಾರ, ಪ್ರಧಾನಿಯವರು ತಮ್ಮ ಭಾಷಣದಲ್ಲಿ ಕೇಂದ್ರ ಬಜೆಟ್ 2022 ಕುರಿತು ಮಾತನಾಡಲಿದ್ದಾರೆ. ಇದಕ್ಕಾಗಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರಧಾನಿ ಭಾಷಣವನ್ನು ಜನರು ಆಲಿಸಲು ದೇಶದ ಹಲವು ಜಿಲ್ಲೆಗಳಲ್ಲಿ ಎಲ್ಇಡಿ ಪರದೆಗಳನ್ನು ಸ್ಥಾಪಿಸಲಾಗಿದೆ.
ಕೇಂದ್ರ ಸರ್ಕಾರವು ಸಮಾಜದ ಎಲ್ಲಾ ವರ್ಗಗಳ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದೆ ಮತ್ತು ಕೇಂದ್ರ ಬಜೆಟ್ ಆ ಬದ್ಧತೆಯ ಪ್ರತಿಬಿಂಬವಾಗಿದೆ ಎಂದು ಪ್ರಧಾನಿ ಮೋದಿ ಹೈಲೈಟ್ ಮಾಡುವ ನಿರೀಕ್ಷೆಯಿದೆ ಎಂದು ಮೂಲಗಳು ಹೇಳುತ್ತವೆ.
ಮುಂದಿನ ತಿಂಗಳು ಐದು ರಾಜ್ಯಗಳಲ್ಲಿ ಚುನಾವಣೆ ನಡೆಯಲಿರುವ ಸಂದರ್ಭದಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಿದ್ದಾರೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ರಿಂದ 7 ಹಂತಗಳ ವಿಧಾನಸಭಾ ಚುನಾವಣೆ, ಫೆಬ್ರವರಿ 27 ರಿಂದ ಮಣಿಪುರ ಎರಡು ಹಂತಗಳಲ್ಲಿ ಮತ್ತು ಪಂಜಾಬ್, ಗೋವಾ ಮತ್ತು ಉತ್ತರಾಖಂಡ್ ಫೆಬ್ರವರಿ 14 ರಂದು ಚುನಾವಣೆಗಳನ್ನು ಎದುರಿಸಲಿದೆ. ಈ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಪ್ರಧಾನಿ ಭಾಷಣ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.