ಧಾರವಾಡದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧ ಶ್ರೀ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.
ಹರಿಹರ ರಾಜನಹಳ್ಳಿ ವಾಲ್ಮೀಕಿ ಪೀಠದ ಸ್ವಾಮೀಜಿ ನೇತೃತ್ವದಲ್ಲಿ ಧಾರವಾಡದ ಡಿಸಿ ಕಚೇರಿ ಎದುರು ಸಭಾಪತಿಗಳ ವಿರುದ್ಧ ಪ್ರತಿಭಟನೆ ನಡೆಸಲಾಗಿದ್ದು, ರಾಜೀನಾಮೆಗೆ ಆಗ್ರಹಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.
ಧಾರವಾಡದ ಸರ್ವೋದಯ ಶಿಕ್ಷಣ ಸಂಸ್ಥೆ ವಿಚಾರದಲ್ಲಿ ಹೊರಟ್ಟಿ ರಾಜಕೀಯ ಪ್ರಭಾವ ಬಳಸಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಶಾಲೆಯಲ್ಲಿ ವರ್ಗಾವಣೆ, ನೇಮಕಾತಿ ಅಕ್ರಮದ ಬಗ್ಗೆ ಆರೋಪಿಸಲಾಗಿದೆ.