ಶಿವಮೊಗ್ಗ ವಿಜಯಪುರ ಜಿಲ್ಲೆಗಳ ಜನತೆಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಈ ಎರಡು ಜಿಲ್ಲೆಗಳಲ್ಲಿ ನಡೆಯುತ್ತಿದ್ದ ವಿಮಾನ ನಿಲ್ದಾಣಗಳ ಕಾಮಗಾರಿ ಡಿಸೆಂಬರ್ ಅಂತ್ಯದಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದ್ದು, ಹೀಗಾಗಿ ಉಡಾನ್ ಸೇವೆಯ ಗುತ್ತಿಗೆ ಪಡೆಯಲು ಖಾಸಗಿ ವಿಮಾನಯಾನ ಸಂಸ್ಥೆಗಳಿಗೆ ಆಹ್ವಾನಿಸಲಾಗಿದೆ.
ಶಿವಮೊಗ್ಗದ ಸೋಗಾನೆ ಬಳಿ ಸುಮಾರು 758 ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಡೆದಿದ್ದು, ಈಗಾಗಲೇ ರನ್ ವೇ, ಎಪ್ರಾನ್, ಟ್ಯಾಕ್ಸಿ ಮಾರ್ಗ ಸಂಪರ್ಕ ರಸ್ತೆ, ವರ್ತುಲ ರಸ್ತೆಗಳ ಕಾಮಗಾರಿ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ಇನ್ನುಳಿದ ಕಾಮಗಾರಿಗಳು ವರ್ಷಾಂತ್ಯಕ್ಕೆ ಪೂರ್ಣಗೊಳ್ಳುವ ಸಾಧ್ಯತೆ ಇದೆ.
ಮಂಗಳೂರಲ್ಲಿ ಬೆಚ್ಚಿಬೀಳಿಸುವ ಮಾಂಸದಂಧೆ: ವಿದ್ಯಾರ್ಥಿನಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ್ದ ಗ್ಯಾಂಗ್ ಅರೆಸ್ಟ್
ಇನ್ನು ವಿಜಯಪುರದಲ್ಲಿ ಸುಮಾರು 727 ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಡೆಯುತ್ತಿದ್ದು, ಶಿವಮೊಗ್ಗ ಹಾಗೂ ವಿಜಯಪುರ ವಿಮಾನ ನಿಲ್ದಾಣಗಳ ಕಾಮಗಾರಿ ಡಿಸೆಂಬರ್ ಒಳಗಾಗಿ ಪೂರ್ಣಗೊಂಡು ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದು ತಿಳಿದುಬಂದಿದೆ.