ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ರಾಜಕೀಯ ತಿರುವು ಪಡೆದುಕೊಳ್ಳುತ್ತಿದ್ದು, ಹಿಜಾಬ್ ವಿಚಾರವನ್ನು ಬಿಜೆಪಿ ನಾಯಕರು ದೊಡ್ಡದು ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಸಮವಸ್ತ್ರ ಕಡ್ಡಾಯ ಎಂದು ಎಲ್ಲೂ ಹೇಳಿಲ್ಲ. ಇದು ಸಂವಿಧಾನದಲ್ಲಿ ನೀಡಿರುವ ಮೂಲಭೂತ ಹಕ್ಕಾಗಿದೆ. ಸಂಘ ಪರಿವಾರದ ಪ್ರಯೋಗಾಲಯವೇ ಕರಾವಳಿ. ಶಿಕ್ಷಣದಲ್ಲಿ ರಾಜಕೀಯ ಬೆರೆಸುತ್ತಿರುವುದು ಸರಿಯಲ್ಲ. ರಾಜ್ಯ ಸರ್ಕಾರ ಇದಕ್ಕೆಲ್ಲ ಕುಮ್ಮಕ್ಕು ನೀಡಬಾರದು ಎಂದು ಕಿಡಿಕಾರಿದ್ದಾರೆ.
ಐಸಿಯುನಲ್ಲಿರುವ ಶೇ.31 ರಷ್ಟು ಕೊರೊನಾ ಸೋಂಕಿತರಲ್ಲಿ ʼಓಮಿಕ್ರಾನ್ʼ ಪತ್ತೆ…! ಬಿಬಿಎಂಪಿ ದಾಖಲೆಗಳಲ್ಲಿ ಮಹತ್ವದ ಮಾಹಿತಿ ಬಹಿರಂಗ
ಕುಂದಾಪುರ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಗೇಟ್ ಬಂದ್ ಮಾಡಿದ್ದು ಸರಿಯಲ್ಲ. ಇದು ಸಂವಿಧಾನ ವಿರೋಧಿ. ಮಕ್ಕಳ ವಿದ್ಯಾಭ್ಯಾಸ ತಡೆಗಟ್ಟುವ ಪ್ರಯತ್ನ ಇದಾಗಿದೆ. ಇಂತಹ ಕ್ರಮ ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.