ಬೆಂಗಳೂರು: ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಎಸ್ಐಟಿ ತನಿಖಾ ತಂಡ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿದೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಕೆಲಸ ಕೊಡಿಸುವ ಆಮಿಷವೊಡ್ದಿ ತನ್ನ ಮೇಲೆ ಅತ್ಯಾಚಾರ, ಲೈಂಗಿಕ ಕಿರುಕುಳ ನಡೆಸಿದ್ದಾಗಿ ಯುವತಿಯೋರ್ವಳು ಆರೋಪ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಕೂಡ ವೈರಲ್ ಆಗಿತ್ತು. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ದಾಖಲಿಸಿದ್ದರು.
ನಾನು ಇದುವರೆಗೂ ಭದ್ರತೆ ತೆಗೆದುಕೊಂಡಿಲ್ಲಾ, ಇನ್ಮುಂದೆಯೂ ತೆಗೆದುಕೊಳ್ಳುವುದಿಲ್ಲ-ಅಸಾದುದ್ದೀನ್ ಓವೈಸಿ ಹೇಳಿಕೆ
ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ)ದ ಮೂಲಕ ಪ್ರಕರಣದ ತನಿಖೆ ನಡೆಸಲಾಗಿತ್ತು. ಇದೀಗ ಎಸ್ಐಟಿ ತನಿಖೆಯ ಅಂತಿಮ ವರದಿ ಕೋರ್ಟ್ ಗೆ ಸಲ್ಲಿಕೆಯಾಗಿದ್ದು, ಇದೇ ವೇಳೆ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ತನಿಖಾ ತಂಡ ಬಿ ರಿಪೋರ್ಟ್ ಸಲ್ಲಿಕೆ ಮಾಡಿದೆ.
ಅತ್ಯಾಚಾರ ನಡೆದಿದೆ ಎಂಬುದಕ್ಕೆ ಯಾವುದೇ ಸಾಕ್ಷಿ ಸಿಗದ ಹಿನ್ನೆಲೆಯಲ್ಲಿ ಎಸ್ಐಟಿ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಯುವತಿ ಪರ ವಕೀಲರು ಬಿ ರಿಪೋರ್ಟ್ ಗೆ ಪ್ರೊಟೆಸ್ಟ್ ಪಿಟಿಷನ್ ಸಲ್ಲಿಸಲು ನಿರ್ಧರಿಸಿದ್ದಾರೆ.