ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನದ ಒಳನುಸುಳುವಿಕೆಯನ್ನು ಗಡಿ ಭದ್ರತಾ ಪಡೆ(ಬಿಎಸ್ಎಫ್) ಸಿಬ್ಬಂದಿ ವಿಫಲಗೊಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಸಾಂಬಾ ಸೆಕ್ಟರ್ನಲ್ಲಿ ಶನಿವಾರ ರಾತ್ರಿ ಪಾಕಿಸ್ತಾನದಿಂದ 3 ನುಸುಳುಕೋರರು ಭಾರತದ ಗಡಿಯನ್ನು ಪ್ರವೇಶಿಸಲು ಪ್ರಯತ್ನಿಸುತ್ತಿದ್ದರು. ಅಷ್ಟರಲ್ಲಿ ನಿಯೋಜಿತ ಬಿಎಸ್ಎಫ್ ಸಿಬ್ಬಂದಿ ಮೂವರನ್ನೂ ಕೊಂದು ಹಾಕಿದರು. ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಘಟನಾ ಪ್ರದೇಶ ಸೇರಿದಂತೆ ಗಡಿಭಾಗದಲ್ಲಿ ಭಾರೀ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.