ನವದೆಹಲಿ: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ನಿಧನಕ್ಕೆ ದೇಶಾದ್ಯಂತ 2 ದಿನ ಶೋಕಾಚರಣೆ ಘೋಷಿಸಿದ್ದು, ರಾಷ್ಟ್ರಧ್ವಜ ಅರ್ಧ ಮಟ್ಟಕ್ಕೆ ಹಾರಿಸಲು ಸರ್ಕಾರ ಆದೇಶಿಸಿದೆ.
ಹಿಂದಿ ಸೇರಿದಂತೆ ಭಾರತದ 36 ಭಾಷೆಗಳಲ್ಲಿ ಹಾಡಿರುವ ಖ್ಯಾತ ಗಾಯಕಿ, ಭಾರತರತ್ನ, ದಾದಾಸಾಹೇಬ್ ಫಾಲ್ಕೆ ಹಾಗೂ ಪದ್ಮಭೂಷಣ ಸೇರಿ ಹಲವಾರು ಪ್ರಶಸ್ತಿ ಪುರಸ್ಕೃತ 92 ವರ್ಷದ ಲತಾ ಮಂಗೇಶ್ಕರ್ ಗೌರವಾರ್ಥ ದೇಶಾದ್ಯಂತ 2 ದಿನ ಶೋಕಾಚರಣೆ ಹಾಗೂ ರಾಷ್ಟ್ರಧ್ವಜ ಅರ್ಧ ಮಟ್ಟಕ್ಕೆ ಹರಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಸುಮಾರು ಒಂದು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಲತಾ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.