ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಹೊಸ ಪ್ರಕರಣಗಳ ಸಂಖ್ಯೆ 10,000 ಒಳಗೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷದೊಳಗೆ ವರದಿಯಾಗಿದೆ.
ರಾಜ್ಯದಲ್ಲಿ ಇಂದು ಹೊಸದಾಗಿ 8425 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 47 ಜನ ಸೋಂಕಿತರು ಮೃತಪಟ್ಟಿದ್ದಾರೆ. 19,800 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 38,96,158 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 39,347 ಸೋಂಕಿತರು ಮೃತಪಟ್ಟಿದ್ದಾರೆ. 37,58,997 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 97,781 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡ 6.51 ರಷ್ಟು ಇದೆ.
ರಾಜಧಾನಿ ಬೆಂಗಳೂರಿನಲ್ಲಿ ಹೊಸದಾಗಿ 3822 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 17 ಜನ ಮೃತಪಟ್ಟಿದ್ದಾರೆ. 9893 ಸೋಂಕಿತರು ಗುಣಮುಖರಾಗಿದ್ದಾರೆ. 39.654 ಸಕ್ರಿಯ ಪ್ರಕರಣಗಳಿವೆ.
ಬಳ್ಳಾರಿ 249, ಬೆಳಗಾವಿ 221, ಹಾಸನ 276, ಧಾರವಾಡ 211, ಕೊಡಗು 219, ಮಂಡ್ಯ 241, ಮೈಸೂರು 582, ತುಮಕೂರು 318 ಹೊಸ ಪ್ರಕರಣ ವರದಿಯಾಗಿವೆ.
ಬೆಂಗಳೂರು ನಗರ 17, ಬಳ್ಳಾರಿ 7, ದಕ್ಷಿಣಕನ್ನಡ 5, ಮೈಸೂರು 3 ಸೇರಿ ರಾಜ್ಯದಲ್ಲಿ 47 ಜನ ಸೋಂಕಿತರು ಮೃತಪಟ್ಟಿದ್ದಾರೆ.