ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಸಚಿವ ಗೋವಿಂದ ಕಾರಜೋಳ ಅವರು ಆರ್.ಟಿ. ನಗರದಲ್ಲಿರುವ ಮುಖ್ಯಮಂತ್ರಿ ಬೊಮ್ಮಾಯಿ ಅವರ ನಿವಾಸಕ್ಕೆ ಬೆಳ್ಳಂಬೆಳಗ್ಗೆಯೇ ಆಗಮಿಸಿದ್ದು, ಅವರ ನಡೆ ಕುತೂಹಲ ಮೂಡಿಸಿದೆ.
ಇಂದು ಬೆಳಿಗ್ಗೆ 7 ಗಂಟೆಗೆ ಸಿಎಂ ದೆಹಲಿಗೆ ತೆರಳಲಿದ್ದು, ಮಧ್ಯಾಹ್ನ 1 ಗಂಟೆಗೆ ದೆಹಲಿಯ ಖಾಸಗಿ ಹೋಟೆಲ್ ನಲ್ಲಿ ರಾಜ್ಯದ ಸಂಸದರು ಹಾಗೂ ಕೇಂದ್ರ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ. ರಾಜ್ಯದ ಅಭಿವೃದ್ಧಿ ಯೋಜನೆ, ನೀರಾವರಿ ವಿಚಾರಗಳಿಗೆ ಸಂಬಂಧಿಸಿದಂತೆ ಸಿಎಂ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಇದೇ ವೇಳೆ ಪ್ರಧಾನಿ ಮತ್ತು ಪಕ್ಷದ ವರಿಷ್ಠರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನರ್ ರಚನೆಯ ಬಗ್ಗೆ ಗ್ರೀನ್ ಸಿಗ್ನಲ್ ಪಡೆದುಕೊಳ್ಳಲಿದ್ದಾರೆ. ಆಕಾಂಕ್ಷಿಗಳ ಒತ್ತಡ ಹೆಚ್ಚಾಗಿದ್ದು, ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎಂಬುದು ಕುತೂಹಲ ಮೂಡಿಸಿದೆ.