ಚಾಮರಾಜನಗರ: ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ನಿಗದಿಯಾಗಿರುವಂತೆಯೇ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಚಾಮರಾಜನಗರದಲ್ಲಿ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿ, ಈ ವರ್ಷದ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಈಗಾಗಲೇ ನಿಗದಿಪಡಿಸುವಂತೆಯೇ ನಡೆಯಲಿದೆ ಎಂದು ಹೇಳಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ. ಕೊರೋನಾ ಮೂರನೇ ಅಲೆಯಲ್ಲಿ ಯಾವುದೇ ತೊಂದರೆ ಇಲ್ಲದೆ ಶಾಲೆಗಳು ನಡೆದಿವೆ. ಮಕ್ಕಳ ಹಾಜರಾತಿಯೂ ಉತ್ತಮವಾಗಿದೆ. ನಿಗದಿಪಡಿಸಿರುವ ವೇಳಾಪಟ್ಟಿಯಂತೆ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ನಡೆಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.