alex Certify BIG NEWS: ಬಿಜೆಪಿ ಶಾಸಕನ ವಿರುದ್ಧ ದೌರ್ಜನ್ಯ ಆರೋಪ; ಫೇಸ್ ಬುಕ್ ನಲ್ಲಿ ಲೈವ್ ಬಂದ ಮಹಿಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಶಾಸಕನ ವಿರುದ್ಧ ದೌರ್ಜನ್ಯ ಆರೋಪ; ಫೇಸ್ ಬುಕ್ ನಲ್ಲಿ ಲೈವ್ ಬಂದ ಮಹಿಳೆ

ಬೆಂಗಳೂರು: ಬಿಜೆಪಿ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್ ನಿಂದ ನನ್ನ ಮೇಲೆ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿ ಮಹಿಳೆಯೋರ್ವರು ಫೇಸ್ ಬುಕ್ ಲೈವ್ ಗೆ ಬಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ದೂರು ನೀಡಿದ್ದಾರೆ.

ವಕೀಲ ಜಗದೀಶ್ ಅವರೊಂದಿಗೆ ಫೇಸ್ ಬುಕ್ ಲೈವ್ ಗೆ ಬಂದ ಮಹಿಳೆ ಸೇಡಂ ಶಾಸಕ ರಾಜ್ ಕುಮಾರ್ ಪಾಟೀಲ್ ನಿಂದ ತನಗೆ ಅನ್ಯಾಯವಾಗಿದೆ. ದೂರು ನೀಡಲು ಹೋದರೆ ವಿಧಾನಸೌಧ ಠಾಣೆ ಪೊಲಿಸರು ನನ್ನನ್ನು ಕೂಡಿಟ್ಟು ಬೆದರಿಕೆಯೊಡ್ಡುತ್ತಿದ್ದಾರೆ. ಇದರ ಹಿಂದೆ ಕಾಂಗ್ರೆಸ್ ಕುಮ್ಮಕ್ಕಿದೆ ಎಂದು ಬರೆದುಕೊಡಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ 4 ದಿನಗಳ ಹಿಂದೆಯೂ ಮಹಿಳೆ ಸಿಎಂ ಫೇಸ್ ಬುಕ್ ಖಾತೆಯಲ್ಲಿ ತನ್ನ ಮೇಲೆ ಶಾಸಕನಿಂದ ದೌರ್ಜನ್ಯ ನಡೆಸಲಾಗಿದೆ ಎಂದು ಕಮಂಟ್ ಹಾಕಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...