ನವದೆಹಲಿ: ಹಿಜಾಬ್ ಹಾಗೂ ಕೇಸರಿ ಶಾಲು ವಿಚಾರವಾಗಿ ವಿದ್ಯಾರ್ಥಿಗಳು ಶಾಂತಿ ಕದಡುವ ಕೆಲಸ ಮಾಡಬಾರದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಹಿಜಾಬ್ ವಿವಾದ ಕೋರ್ಟ್ ನಲ್ಲಿದೆ. ನಾಳೆ ನ್ಯಾಯಾಲಯದಿಂದ ತೀರ್ಪು ಬರಲಿದೆ. ತೀರ್ಪು ಬಂದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.
ಹಿಜಾಬ್ ವಿವಾದದ ಹಿಂದೆ ಕೆಲ ಶಕ್ತಿಗಳು ಕೆಲಸ ಮಾಡುತ್ತಿವೆ. ಕೇರಳ, ಮಹಾರಾಷ್ಟ್ರದಲ್ಲಿಯೂ ಈ ಹಿಂದೆ ವಿವಾದ ನಡೆದಿತ್ತು. ಸಧ್ಯ ಕೋರ್ಟ್ ನಲ್ಲಿ ಪ್ರಕರಣ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಮಾತನಾಡಲ್ಲ ಎಂದರು.
ಇದೇ ವೇಳೆ, ರಾಜ್ಯಕ್ಕೆ ನೀರಿನ ಪಾಲು ವಿಚಾರವಾಗಿಯೂ ಮಾತನಾಡಿದ ಸಿಎಂ, ರಾಜ್ಯಕ್ಕೆ ನ್ಯಾಯಸಮ್ಮತ ನೀರು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗುತ್ತೇವೆ. ನೀರಿನ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ನದಿ ಜೋಡಣೆ ಬಗ್ಗೆ ನನಗೆ ಸ್ಪಷ್ಟ ನಿಲುವಿದೆ. ನಮ್ಮ ನಿಲುವನ್ನು ನಾವು ಸ್ಪಷ್ಟವಾಗಿ ಮಂಡಿಸುತ್ತೇವೆ ಎಂದು ಹೇಳಿದರು.