ನವದೆಹಲಿ: ಸದ್ಯಕ್ಕೆ ರಾಜ್ಯ ಸಂಪುಟ ವಿಸ್ತರಣೆ ಕಸರತ್ತು ಬೇಡವೆಂದು ವರಿಷ್ಠರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಅಭಿವೃದ್ಧಿ ಯೋಜನೆ, ನೀರಾವರಿ ವಿಚಾರಗಳಿಗೆ ಸಂಬಂಧಿಸಿದಂತೆ ದೆಹಲಿ ಪ್ರವಾಸ ಕೈಗೊಂಡಿದ್ದು, ಇದೇ ಸಂದರ್ಭದಲ್ಲಿ ಅವರು ಪಕ್ಷದ ಕೇಂದ್ರ ನಾಯಕರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ, ಪುನಾರಚನೆ ರಚನೆ ಕುರಿತಂತೆ ಚರ್ಚೆ ನಡೆಸಿದ್ದಾರೆ.
ಸದ್ಯಕ್ಕೆ ಸಂಪುಟ ಕಸರತ್ತು ಬೇಡವೆಂದು ವರಿಷ್ಠರ ಸೂಚನೆ ನೀಡಿದ್ದಾರೆ. 5 ರಾಜ್ಯಗಳ ವಿಧಾನಸಭೆ ಚುನಾವಣೆ ಮುಗಿಯುವವರೆಗೆ ಕಾಯಿರಿ. ಸಂಪುಟದಲ್ಲಿ ಬದಲಾವಣೆ ಮಾಡಿ ಅನಗತ್ಯ ಗೊಂದಲ ಮಾಡುವುದು ಬೇಡ ಎಂದು ಭೇಟಿಯ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ಅವರಿಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.
ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಹೆಚ್ಚುತ್ತಿರುವ ಒತ್ತಡ, ನಿಗಮ-ಮಂಡಳಿ ನೇಮಕ ಮತ್ತು ರಾಜ್ಯ ರಾಜಕೀಯ ಬೆಳವಣಿಗೆ ಕುರಿತಂತೆ ಅಮಿತ್ ಶಾ ಅವರೊಂದಿಗೆ ಮುಖ್ಯಮಂತ್ರಿಗಳು ಸಮಾಲೋಚನೆ ನಡೆಸಿದ್ದಾರೆ. ಸದ್ಯಕ್ಕೆ ಸಂಪುಟ ವಿಸ್ತರಣೆ ಬೇಡ. ಐದು ರಾಜ್ಯಗಳ ಚುನಾವಣೆ ಮುಗಿಯುವವರೆಗೆ ಕಾಯಿರಿ ಎಂದು ಸಿಎಂಗೆ ಅಮಿತ್ ಶಾ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಆದರೆ, ಅಮಿತ್ ಶಾ ಅವರ ಸೂಚನೆಯಂತೆ ಸಿಎಂ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಲಿದ್ದು, ಸಂಪುಟ ವಿಸ್ತರಣೆಗೆ ಗ್ರೀನ್ ಸಿಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.