ಬೆಂಗಳೂರು: ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಮಾರ್ಚ್ 28 ರಿಂದ ಏಪ್ರಿಲ್ 13 ರವರೆಗೆ ನಡೆಯಲಿದೆ. ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಪ್ರಥಮ ಪಿಯುಸಿ ವಾರ್ಷಿಕ ಮತ್ತು ಪೂರಕ ಪರೀಕ್ಷೆಗಳನ್ನು ಜಿಲ್ಲಾಮಟ್ಟದಲ್ಲಿ ನಡೆಸುವಂತೆ ಎಲ್ಲ ಜಿಲ್ಲೆಗಳ ಉಪ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.
ಮಾರ್ಚ್ 28 ರಿಂದ ಏಪ್ರಿಲ್ 13 ರವರೆಗೆ ಮಧ್ಯಾಹ್ನ 2.30 ರಿಂದ 5:45 ಅವಧಿಯಲ್ಲಿ ವೇಳಾಪಟ್ಟಿಗೆ ಅನುಗುಣವಾಗಿ ವಾರ್ಷಿಕ ಪರೀಕ್ಷೆಗಳನ್ನು ನಡೆಸುವಂತೆ ಸೂಚಿಸಿದ್ದಾರೆ. ಏಪ್ರಿಲ್ 20 ರೊಳಗೆ ಮೌಲ್ಯಮಾಪನ ಪೂರ್ಣಗೊಳಿಸಬೇಕು. ಏಪ್ರಿಲ್ 30 ರಂದು ಆಯಾ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟಿಸಬೇಕು. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ಶುಲ್ಕ ಪಾವತಿಸಲು ಮೇ 16 ಕೊನೆಯ ದಿನವಾಗಿದೆ. ಮೇ 25 ರಿಂದ ಜೂನ್ 6 ರವರೆಗೆ ಪೂರಕ ಪರೀಕ್ಷೆ ನಡೆಸಿ ಜೂನ್ 15ರಂದು ಪೂರಕ ಪರೀಕ್ಷೆಯ ಪಲಿತಾಂಶ ಪ್ರಕಟಿಸಬೇಕಿದೆ ಎಂದು ಹೇಳಲಾಗಿದೆ.