ಶಿವಮೊಗ್ಗ: ಉಡುಪಿ, ಕುಂದಾಪುರ ಕಾಲೇಜುಗಳಿಂದ ಆರಂಭವಾದ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಇದೀಗ ರಾಜ್ಯದ ಇತರ ಭಾಗಗಳಿಗೂ ವ್ಯಾಪಿಸಿದ್ದು, ಸರ್ಕಾರಿ ಕಾಲೇಜುಗಳು ಅಕ್ಷರಶಃ ರಣಾಂಗಣವಾಗಿ ಮಾರ್ಪಡುತ್ತಿವೆ.
ಶಿವಮೊಗ್ಗದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು, ಕಾಲೇಜು ಧ್ವಜ ಸ್ತಂಭದಲ್ಲಿ ಕೇಸರಿ ಬಾವುಟ ಹಾರಿಸಿ ಸಂಭ್ರಮಿಸಿದ್ದಾರೆ. ಮತ್ತೊಂದೆಡೆ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ಬಿ.ಹೆಚ್.ರಸ್ತೆ ತಡೆ ನಡೆಸಿದ ಹಿಂದೂ ವಿದ್ಯಾರ್ಥಿಗಳು ಹಿಜಾಬ್ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.
ಮಣಿಪುರ ಸಿಎಂ ಅಳಿಯನ ಬಳಿಯಿದೆ ಮಾವನಿಗಿಂತ ಐದು ಪಟ್ಟು ಅಧಿಕ ಆಸ್ತಿ….!
ವಿದ್ಯಾರ್ಥಿಗಳ ಪ್ರತಿಭಟನೆ ಭುಗಿಲೆದ್ದಿದ್ದು, ಕಾಲೇಜಿನ ಮೇಲೆ ಕಲ್ಲುತೂರಾಟ ನಡೆಸಲಾಗಿದೆ. ಕಾಲೇಜು ಆವರಣದಲ್ಲಿ ಬಿಗುವಿನ ವಾತಾವಣ ನಿರ್ಮಾಣವಾಗಿದೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.