alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಂದು ಮತ್ತೆ ಏರಿಕೆ; ನಿಲ್ಲುತ್ತಿಲ್ಲ ಏರಿಕೆಯಾಗುತ್ತಿರುವ ಸಾವಿನ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಂದು ಮತ್ತೆ ಏರಿಕೆ; ನಿಲ್ಲುತ್ತಿಲ್ಲ ಏರಿಕೆಯಾಗುತ್ತಿರುವ ಸಾವಿನ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೋವಿಡ್ ಮೂರನೇ ಅಲೆ ನಿನ್ನೆಗೆ ಹೋಲಿಸಿದರೆ ಇಂದು ಕೊಂಚ ಏರಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 71,365 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಆದರೆ ಸೋಂಕಿತರ ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, 24 ಗಂಟೆಯಲ್ಲಿ 1,217 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,05,279 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 8,92,828 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 1,72,211 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 1,70,87,06,705 ಜನರಿಗೆ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...